ಬಿಡುಗಡೆಗೆ ಸಜ್ಜಾಗುತ್ತಿದೆ ಕಿಚ್ಚ ಸುದೀಪ ನಟನೆಯ ʼವಿಕ್ರಾಂತ್‌ ರೋಣʼ:‌ ರಿಲೀಸ್‌ ಯಾವಾಗ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಿಚ್ಚ ಸುದೀಪ್‌ ಅಭಿನಯನದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್‌ ರೋಣ ರಿಲೀಸ್‌ ಡೇಟ್‌ ಫೈನಲ್‌ ಆದಂತಾಗಿದೆ.
ಇಷ್ಟು ದಿನ ಲಾಕ್‌ ಡೌನ್‌ ನಿಂದ ಸಿನಿಮಾಗಳ ರಿಲೀಸ್‌ ಡೇಟ್‌ ಮುಂದೂಡುತ್ತಿದ್ದವರಿಗೆ ಈಗ ರಿಲೀಫ್‌ ಸಿಕ್ಕಿದೆ.
ವಿಕ್ರಾಂತ್‌ ರೋಣ ಪ್ಯಾನ್‌ ಇಂಡಿಯಾ ಚಿತ್ರವಾಗಿದ್ದು, ಫೆ.24ಕ್ಕೆ ಚಿತ್ರಮಂದಿರಗಳಲ್ಲಿ ಬಿಡಗಡೆಯಾಗಲಿದೆ. ಈಗಾಗಲೇ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಮುಗಿಯುವ ಹಂತದಲ್ಲಿದೆ ಎಂದು ಚಿತ್ರತಂಡ ತಿಳಿಸಿದೆ.
ವಿಕ್ರಾಂತ್ ರೋಣ ಚಿತ್ರಕ್ಕೆ ಅನೂಪ್‌ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್, ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!