ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆಯ ಹೀನಾಯ ಸೋಲನ್ನು ಅರಗಿಸಿಕೊಳ್ಳಲಾಗದ ಕಾಂಗ್ರೆಸ್ ತನ್ನ ನೀಚ ಬುದ್ಧಿಯನ್ನು ತೋರಿದೆ. ಇಲ್ಲಸಲ್ಲದ ಆರೋಪ ಹೊರಿಸಿ ಬಿಎಸ್‌ವೈ ಅವರ ಹೆಸರು ಹಾಳು ಮಾಡುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಬಿಜೆಪಿ, ತಮ್ಮ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್ ಗಾಂಧಿ ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಮಾನ್ಯ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ ಎಂದು ದೂರಿದೆ.
ರಾಜ್ಯದಲ್ಲಿ ಬಿಎಸ್‌ವೈ ಅವರಿಗೆ ವಿಶೇಷ ಗೌರವವಿದೆ. ಅವರನ್ನು ಕೆಣಕಿದರೆ ಜನ ಇಡೀ ಕಾಂಗ್ರೆಸ್‌ನ್ನೇ ನಿರ್ನಾಮ ಮಾಡುತ್ತಾರೆ ಎಂದು ಬಿಜೆಪಿ ಗುಡುಗಿದೆ.
ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ @INCIndia ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ. @BJP4Karnataka ವಿರುದ್ಧ ಅಪಪ್ರಚಾರ ಮಾಡಿದ್ದ @RahulGandhi ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ… pic.twitter.com/JtFwfqQQrG
— BJP Karnataka (@BJP4Karnataka) June 13, 2024