September 2, 2026
Wednesday, September 2, 2026
spot_img

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ!

ಹೊಸದಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದ ಬಹುತೇಕ ಗ್ರಾಮ ಪಂಚಾಯತ್‌ಗಳ ಆಡಳಿತಾವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.‌

ಕ್ಷೇತ್ರ ಪುನರ್‌ವಿಂಗಡಣೆ:

ಕೆಲವು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಹೀಗಾಗಿ ವಾರ್ಡ್‌ಗಳ ಮರುಹಂಚಿಕೆ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಅನಿವಾರ್ಯವಾಗಿದೆ. ವಾರ್ಡ್‌ಗಳ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಜುಲೈ ಮತ್ತು ಆಗಸ್ಟ್ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು. ಎಲ್ಲಾ ಸಿದ್ಧತೆಗಳನ್ನು ಮುಗಿಸಿ ಆಗಸ್ಟ್ ಅಂತ್ಯದ ವೇಳೆಗೆ ಅಂತಿಮ ವರದಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ:

45 ದಿನಗಳಲ್ಲಿ ಇಡೀ ಪ್ರಕ್ರಿಯೆ ಪೂರ್ಣ

ಸರ್ಕಾರದಿಂದ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆಯ ಪಟ್ಟಿಯನ್ನು ಸ್ವೀಕರಿಸಿದ ನಂತರ, ಚುನಾವಣಾ ಆಯೋಗವು ಕೇವಲ 45 ದಿನಗಳ ಅವಧಿಯಲ್ಲಿ ಚುನಾವಣಾ ಅಧಿಸೂಚನೆ ಹೊರಡಿಸಿ, ಮತದಾನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿ ಮುಗಿಸಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !