ಹೊಸ ತೊಟ್ಟಿಗಾಗಿ ಶಿಥಿಲ ತೊಟ್ಟಿ ಏರಿ ಪ್ರತಿಭಟನೆ ನಡೆಸಿದ ಗ್ರಾಪಂ ಅಧ್ಯಕ್ಷ!

ಹೊಸದಿಗಂತ ವರದಿ, ಶಿವಮೊಗ್ಗ:

ಹೊಸದಾಗಿ 1 ಲಕ್ಷ ಲೀಟರ್ ನೀರು ತುಂಬುವ ತೊಟ್ಟಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಹೊಸನಗರ ಮಾರುತಿಪುರ ಗ್ರಾಮದಲ್ಲಿ ಅಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಬಿ. ಚಿದಂಬರ ಶಿಥಿಲ ತೊಟ್ಟಿಯ ಮೇಲೆ ಏರಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಅಧಿಕಾರಿಗಳ ನಿರ್ಲಕ್ಷದಿಂದ ಗ್ರಾಮದ ಜನರಿಗೆ ಶುದ್ಧ ನೀರು ಸರಬರಾಜು ಮಾಡಲು ಆಗುತ್ತಿಲ್ಲ. ಈಗಿರುವ ತೊಟ್ಟಿ ಸಂಪೂರ್ಣ ಹಾಳಾಗಿದ್ದು, ನೀರು ಸೋರುತ್ತಿದೆ. ಪಿಲ್ಲರ್‌ಗಳು ಶಿಥಿಲಗೊಂಡಿವೆ. ಐದಾರು ವರ್ಷಗಳಿಂದಲೂ ನೂತನ ತೊಟ್ಟಿ ನಿರ್ಮಾಣಕ್ಕೆ ಪ್ರಸ್ತಾವನೆ ಕಳುಹಿಸಿದರೂ ಪ್ರಯೋಜನ ಆಗುತ್ತಿಲ್ಲ ಎಂದು ದೂರಿದರು. ಹೊಸ ತೊಟ್ಟಿ ನಿರ್ಮಾಣಕ್ಕೆ ಅನುಮೋದನೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಪಟ್ಟು ಹಿಡಿದರು.
ಸ್ಥಳಕ್ಕೆ ಅಗ್ನಿಶಾಮಕ ದಳ, ತಾಲೂಕು ಪಂಚಾಯಿತಿ ಕಾರ‌್ಯನಿರ್ವಹಣಾಕಾರಿ ಪ್ರವೀಣ್ ಹಾಗೂ ವಿವಿಧ ಇಲಾಖೆ ಅಕಾರಿಗಳು ಭೇಟಿ ನೀಡಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ 1 ಲಕ್ಷ ಲೀ. ಸಾಮರ್ಥ್ಯದ ತೊಟ್ಟಿ ಮಂಜೂರಾಗಿದೆ. ಟೆಂಡರ್ ಕರೆದಾಗ ಯಾವುದೇ ಗುತ್ತಿಗೆದಾರ ಭಾಗವಹಿಸಿರಲಿಲ್ಲ. ರೀಟೆಂಡರ್ ಮಾಡಲಾಗಿದೆ ಎಂದು ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಶಿವಪ್ರಸಾದ್ ಮಾಹಿತಿ ನೀಡಿದರು. 15 ದಿನಗಳ ಒಳಗಾಗಿ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿ ನಡೆಸುವುದಾಗಿ ಅಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆ ಅಂತ್ಯಗೊಂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!