ರಾಷ್ಟ್ರಕೂಟರ ನಾಡಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ

ಹೊಸದಿಗಂತ ವರದಿ, ಕಲಬುರಗಿ
ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಅಂಗವಾಗಿ ಇದೇ ಆಗಸ್ಟ್ 20ರಂದು ಕಂದಾಯ ಸಚಿವ ಆರ್. ಅಶೋಕ ಅವರು ರಾಷ್ಟ್ರಕೂಟರ ನಾಡಾದ ಸೇಡಂ ತಾಲೂಕಿನ ಅಡಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಹೇಳಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಚಿವ ಆರ್. ಅಶೋಕ್ ಅವರು 26 ಗಂಟೆಗಳ ಕಾಲ ಗ್ರಾಮದಲ್ಲೇ ಇದ್ದು, ಜನರ ಸಮಸ್ಯೆಗಳು ಆಲಿಸಲಿದ್ದಾರೆ. ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ತಿಳಿಸಿದರು.
ಚಿಂಚೋಳಿ ತಾಲೂಕಿನ 40 ಹಳ್ಳಿಗಳು ಹಾಗೂ ಸೇಡಂ ತಾಲೂಕಿನ 120 ಹಳ್ಳಿ ಮತ್ತು 50 ತಾಂಡಗಳು ಒಳಗೊಂಡ 37 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಮನೆಗೆ ತೆರಳಿ ಸರಕಾರದ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆದಿದ್ದು, ಕಂದಾಯ ಇಲಾಖೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ಒಟ್ಟು 10 ಇಲಾಖೆಗಳಿಂದ ಸರ್ವೇ ಕಾರ್ಯ ಮಾಡಲಾಗುತ್ತಿದೆ. ಈಗಾಗಲೇ ಇಂದಿನ ವರೆಗೆ 22 ವಿಭಾಗದಲ್ಲಿ 35, 700 ಫಲಾನುಭವಿಗಳನ್ನು ಗುರುತಿಸಲಾಗಿದು, ಎಲ್ಲ ಫಲಾನುಭವಿಗಳಿಗೆ ಸಚಿವರು ಪ್ರಮಾಣ ಪತ್ರ ನೀಡಲಿದ್ದಾರೆ. ಒಂದೇ ಕಾರ್ಯಕ್ರಮದಲ್ಲೇ 30 ಸಾವಿರಕ್ಕೂ ಅಧಿಕ ಜನರಿಗೆ ಪ್ರಮಾಣಪತ್ರ ನೀಡುತ್ತಿರುವುದು ರಾಜ್ಯದಲ್ಲೇ ಇದೆ ಮೊದಲ ಕಾರ್ಯಕ್ರಮವಾಗಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!