ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಅದರಲ್ಲಿ ಉಚಿತ ವಿದ್ಯುತ್ ಕೂಡ ಒಂದು.
ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಈ ಯೋಜನೆ ಜೂನ್ 1ರಿಂದ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸ್ಪಷ್ಟವಾಗಿ ಹೇಳಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಜನ ವಿದ್ಯುತ್ ಬಿಲ್ ಕಟ್ಟೋದಿಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ.
ಇನ್ನೂ ಸಿಎಂ ಯಾರೆಂಬುದೇ ಅಧಿಕೃತವಾಗಿ ಪ್ರಕಟವಾಗಿಲ್ಲ ಹೀಗಿರುವಾಗ ಚಿತ್ರದುರ್ಗದ ಜಾಲಿಕಟ್ಟೆ ಗ್ರಾಮಸ್ಥರು ವಿದ್ಯುತ್ ಬಿಲ್ ಪಾವತಿಸಲು ನಿರಾಕರಿಸಿದ್ದಾರೆ. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಅಲ್ವಾ, ನಾವು ಕರೆಂಟ್ ಬಿಲ್ ಕಟ್ಟಲ್ಲ, ಹೋಗಿ ಅವರ ಬಳಿಯೇ ಕೇಳಿ ಎಂದು ಬೆಸ್ಕಾಂ ಮೀಟರ್ ರೀಡರ್‌ಗೆ ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ.