August 25, 2026
Tuesday, August 25, 2026
spot_img

ಮಕ್ಕಳ ಕಳ್ಳನೆಂಬ ಶಂಕೆ: ಗ್ರಾಮಸ್ಥರ ಕೈಗೆ ಸಿಕ್ಕ ವ್ಯಕ್ತಿಗೆ ಧರ್ಮದೇಟು

ಹೊಸದಿಗಂತ ವರದಿ ಹಾವೇರಿ:

ಸಂಶಯಾಸ್ಪದವಾಗಿ ತಿರುಗಾಡುವುದರ ಜೊತೆಗೆ ಎರಡು ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ತಡೆದು ಮಕ್ಕಳ ಕಳ್ಳನೆಂದು ಥಳಿಸಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ವಿರೇಶ ಬಡಿಗೇರ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:

ಈತನ‌ನು ಚೌಡಯ್ಯದಾನಪುರ ಗ್ರಾಮದಲ್ಲಿ ಅನ್ನಸಂತರ್ಪಣೆ ಮಾಡಲು ಬಂದಿರುವೆ ನನ್ನ ಬರ್ಥಡೆ ಇದೆ ಎಂದು ಅನುಮಾನಾಸ್ಪದ ಹೇಳಿಕೆ ನೀಡುತ್ತಿದ್ದನು ಹೀಗಾಗಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಅವನನ್ನು ವಿಚಾರಿಸಿದಾಗ ಸರಿಯಾಗಿ ಮಾಹಿತಿ ಸಮರ್ಪಕ ಉತ್ತರ ನೀಡದೆ ಇರುವುದನ್ನ ಅರಿತು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !