ವಿಮ್ಸ್ ಆಸ್ಪತ್ರೆಯ ಸಾವು ಪ್ರಕರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳು ಸಾವನ್ನಪ್ಪಿರುವ ಪ್ರಕರಣರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದ್ದು, ಪ್ರತಿಪಕ್ಷದ ನಾಯಕರು ಸರಕಾರ ವಿರುದ್ಧ ಹರಿಹಾಯ್ತಿದ್ದಾರೆ.

ಇದರ ಬೆನ್ನಲ್ಲೇ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ಪ್ರಕರಣದ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚನೆ ಮಾಡಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿಯ ತನಿಖಾ ವರದಿ ಕೈಸೇರಿದ ಕೂಡಲೇ ಕರ್ತವ್ಯ ಲೋಪವೆಸಗಿ ಅಮಾಯಕ ರೋಗಿಗಳ ಸಾವಿಗೆ ಕಾರಣರಾದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ನಿನ್ನೆ ಬಳ್ಳಾರಿಯ ಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ಎರಡರಿಂದ ಮೂರು ತಾಸುಗಳ ಕಾಲ ಕರೆಂಟ್ ಕಟ್ ಆಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್​​ನಲ್ಲಿದ್ದ ಇಬ್ಬರು ರೋಗಿಗಳು ಸಾವನ್ನಪ್ಪಿದ್ದರು.

ವಿಮ್ಸ್​ನಲ್ಲಿ ರೋಗಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ಮಾಡಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಅಭಾವದಿಂದ ವೆಂಟಿಲೇಟರ್‌ನಲ್ಲಿದ್ದ ರೋಗಿಗಳ ಸಾವು ಬಿಜೆಪಿ ಸರ್ಕಾರ ಮಾಡಿದ ಕೊಲೆ. ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆಯೂ ಇರಲಿಲ್ಲವೇ? ಸುಧಾಕರ್​​ ಎಂಬ ಅಸಮರ್ಥ ಸಚಿವರ ಕೈಯ್ಯಲ್ಲಿ ರಾಜ್ಯದ ಆರೋಗ್ಯ ವ್ಯವಸ್ಥೆ ಅನಾರೋಗ್ಯ ಪೀಡಿತವಾಗಿರುವುದು ಕೋವಿಡ್ ಕಾಲದಿಂದಲೂ ಸಾಬೀತಾಗುತ್ತಿದೆ ಎಂಬ ಆಕ್ರೋಶ ವ್ಯಕ್ತಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!