May 15, 2026
Friday, May 15, 2026
spot_img

ಯೋಗೇಶ್‌ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿ ದೋಷಿ: ಇಂದು ಶಿಕ್ಷೆ ಪ್ರಮಾಣ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಸಚಿವ ವಿನಯ್‌ ಕುಲಕರ್ಣಿ ಯೋಗೇಶ್‌ಗೌಡ ಕೊಲೆ ಕೇಸ್‌ನಲ್ಲಿ ಅಪರಾಧಿ ಎನ್ನುವ ತೀರ್ಪು ಬಂದಿದೆ. ಇಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದ್ದು, ಜನರ ಕಣ್ಣೆಲ್ಲ ಕೋರ್ಟ್‌ನತ್ತ ನೆಟ್ಟಿದೆ.

10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಜನಪ್ರತಿನಿಧಿಗಳ ಕೋರ್ಟ್ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಆದೇಶಿಸಿದೆ. ಅದರಂತೆ ಪ್ರಕರಣ ಸಂಬಂಧ ಇಂದು ಶಿಕ್ಷೆ ಪ್ರಮಾಣವನ್ನು ಪ್ರಕಟ ಮಾಡಲಿದೆ.

ಆರೋಪಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯೋ ಅನ್ನೋದನ್ನು ಕೋರ್ಟ್‌ ನಿರ್ಧರಿಸಲಿದೆ.

2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. ಇದೀಗ ಎ15 ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ಕೋರ್ಟ್ ಅಪರಾಧಿಗಳು ಅಂತ ಹೇಳಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !