ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಮತ್ತೆ ತಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ‌ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಆರೋಪಗಳಿರುವ ಹಿನ್ನೆಲೆಯಲ್ಲಿ ಮತ್ತೆ ಜಿಲ್ಲೆಯ ಪ್ರವೇಶವನ್ನು ನ್ಯಾಯಾಲಯ ನಿರಾಕರಿಸಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಹೈಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಧಾರವಾಡ ಜಿಲ್ಲೆಯ ಪ್ರವೇಶ ಪಡೆದಿದ್ದರು. ಆದರೆ, ಈಗ ಮತ್ತಿ ಪ್ರವೇಶ ಕೋರಿ ಸಲ್ಲಿಸಿರುವ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ವಜಾಗೊಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಬಿಜೆಪಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಆರೋಪಿಯಾಗಿದ್ದಾರೆ. ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಅವರನ್ನು 2016ರ ಜೂನ್‌ 15ರಂದು ಬರ್ಬರವಾಗಿ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ 2020ರ ನವೆಂಬರ್‌ನಲ್ಲಿ ವಿನಯ್‌ ಕುಲಕರ್ಣಿ ಅವರ ಬಂಧನವಾಗಿತ್ತು. ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಜಾಮೀನಿನ ಮೇಲೆ ಹೊರಬಂದಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಕಂಡರೂ ಶಾಸಕನಿಗೆ ಧಾರವಾಡ ಜಿಲ್ಲೆ ಪ್ರವೇಶದ ಮೇಲಿರುವ ನಿರ್ಬಂಧ ತೆರವು ಮಾಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!