ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಆಗಿ ವಿನಯ್‌ ಕುಮಾರ್‌ ಸಕ್ಸೇನಾ ಪ್ರಮಾಣವಚನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಶಾಸಕಾಂಗದ ಸ್ಥಾನಮಾನ ಹೊಂದಿರುವ ದೆಹಲಿ ಕೇಂದ್ರಾಡಳಿತ ಪ್ರದೇಶದ ನೂತನ ಲೆಫ್ಟಿನೆಂಟ್‌ ಗವರ್ನರ್‌ ಆಗಿ ವಿನಯ್‌ ಕುಮಾರ್‌ ಸಕ್ಸೇನಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಹಿಂದೆ ಲೆ.ಗವರ್ನರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೈಜಾಲ್ ಅವರು ವೈಯುಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ
ಮೇ. 23ರಂದು ಖಾದಿ ಮತ್ತು ಗ್ರಾಮೋದ್ಯೋಗ ನಿಯೋಗದ ಅಧ್ಯಕ್ಷರಾಗಿದ್ದ ವಿನಯ್‌ ಕುಮಾರ್‌ ಸಕ್ಸೇನಾ ಅವರನ್ನು ನೂತನ ಲೆ.ಗವರ್ನರ್‌ ಆಗಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದರು.
ಬೈಜಾಲ್‌ ಅವರು ಐದು ವರ್ಷ ನಾಲ್ಕು ತಿಂಗಳುಗಳ ಕಾಲ ಈ ಸ್ಥಾನದಲ್ಲಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ವಿನಯ್‌ ಸಕ್ಸೇನಾ ಪ್ರಮಾಣವಚನವನ್ನು ಸ್ವೀಕರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!