ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡುವ ಅಗತ್ಯ ಏನೂ ಕಾಣಿಸುತ್ತಿಲ್ಲ. ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ಹೆಸರು ಬಿಟ್ಟಿದ್ದಾರೆ ಎಂದು ಬಿಜೆಪಿ ಅವರು ಹೇಳುತ್ತಿದ್ದಾರೆ. ಡೆತ್‌ನೋಟ್‌ನಲ್ಲಿ ಶಾಸಕರ ಹೆಸರಿದೆ ಅಂತಿದ್ದಾರೆ. ಈ ಕುರಿತು ಎಲ್ಲವನ್ನೂ ನೋಡುತ್ತೇವೆ. ಕಾನೂನು ಪ್ರಕಾರ ತನಿಖೆ ಮಾಡುತ್ತೇವೆ ಎಂದರು.