ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ರೈಲ್ವೆ ಇಲಾಖೆಯ ತಮ್ಮ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಭೇಟಿ ಮಾಡಿ, ಮಾತುಕತೆ ನಡೆಸಿದ್ದ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ನಿಂದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಚರ್ಚೆಗಳು ಹರಿದಾಡಿದ್ದವು.
VIDEO | Wrestlers Vinesh Phogat (@Phogat_Vinesh) and Bajrang Punia (@BajrangPunia) join Congress in the presence party general secretary KC Venugopal (@kcvenugopalmp) and other leaders in Delhi.
(Full video available on PTI Videos – https://t.co/n147TvqRQz) pic.twitter.com/xlV0VOMeXA
— Press Trust of India (@PTI_News) September 6, 2024