ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ವಿನೇಶ್ ಪೋಗಾಟ್ ಇತಿಹಾಸ ನಿರ್ಮಿಸಿದ್ದಾರೆ. ಮಹಿಳೆಯರ 50 ಕೆಜಿ ವಿಭಾಗದ ಸೆಮಿಫೈನಲ್ನಲ್ಲಿ ಕ್ಯೂಬಾದ ಕುಸ್ತಿಪಟು ಯಸ್ನೆಲಿಸ್ ಗುಜ್ಮನ್ ಸೋಲಿಸಿ ಫೈನಲ್ ಪ್ರವೇಶ ಮಾಡಿದ್ದಾರೆ. ಇದರೊಂದಿಗೆ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡಿದ್ದಾರೆ.
ವಿನೇಶ್ ಫೋಗಟ್ ಫೈನಲ್ ಪ್ರವೇಶದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಸಂಸದೆ ಕಂಗನಾ ರಣಾವತ್, ಭಾರತಕ್ಕೆ ಮೊದಲ ಚಿನ್ನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ವಿನೇಶ್ ಫೋಗಟ್ ಒಮ್ಮೆ ಚಳವಳಿಯಲ್ಲಿ ಭಾವಹಿಸಿದ್ದರು. ಈ ವೇಳೆ ಅವರು ಮೋದಿ ನಿಮ್ಮ ಸಮಾಧಿಯನ್ನೂ ಅಗೆಯುತ್ತಾರೆ ಎಂದು ಹೇಳಿದ್ದರು. ಅದರ ಹೊರತಾಗಿಯೂ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿತು. ಅತ್ಯುತ್ತಮ ತರಬೇತಿ, ತರಬೇತುದಾರರು ಮತ್ತು ಸೌಲಭ್ಯಗಳನ್ನು ಪಡೆದರು. ಇದು ಪ್ರಜಾಪ್ರಭುತ್ವದ ಸೌಂದರ್ಯ ಮತ್ತು ಉತ್ತಮ ನಾಯಕ ಎಂದು ಬೆರೆದುಕೊಂಡಿದ್ದಾರೆ.
ಇದಕ್ಕೆ ಸಾಮಾಜಿಕ ಜಾತಲಾಣದಲ್ಲಿ ವ್ಯಾಪಕ ಆಕ್ರೋಶ ಎದುರಾಗಿದ್ದು, ಕಂಗನಾ ಮಾತನಾಡದಿರುವುದು ಒಳ್ಳೆಯದು ಎಂದು ಹೇಳಿದ್ದಾರೆ.
In a democracy, even a dimwit like #KanganaRanaut gets to have an opinion. pic.twitter.com/YA6In6s712
— Smita (@JaitReJait) August 6, 2024