ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಸಲ್ಲಿಸಿದ ರಾಜೀನಾಮೆಯನ್ನು ಭಾರತೀಯ ರೈಲ್ವೇ ಇಲಾಖೆ ಅಂಗೀಕರಿಸಿದೆ.
ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆಯಲ್ಲಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ರಾಜೀನಾಮೆ ಅಂಗೀಕಾರಗೊಂಡಿದೆ.
ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾದ ನಂತರ ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳು ವ್ಯಕ್ತವಾಗಿದ್ದವು. ಅದಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಸೇರ್ಪಡೆಯಾದ ಬಳಿಕ ಕುಸ್ತಿಪಟು ವಿನೇಶ್ ಫೋಗಟ್‌ಗೆ ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿತ್ತು.