ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದ ಭಾರತೀಯ ಕ್ರೀಡಾಪಟುಗಳು ಮತ್ತು ಪದಕ ವಿಜೇತರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸ್ವಾತಂತ್ರ್ಯ ದಿನಾಚರಣೆಯಂದು ತಮ್ಮ ನಿವಾಸದಲ್ಲಿ ಸತ್ಕರಿಸಿದ್ದಾರೆ. ಈ ವೇಳೆ ವಿನೇಶ್ ಅವರ ಸಾಧನೆಯನ್ನು ಉಲ್ಲೇಖಿಸಿದ್ದಾರೆ. ಒಲಿಂಪಿಕ್ಸ್ ಕುಸ್ತಿಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ (ಮಹಿಳೆ) ಎಂಬ ಹೆಗ್ಗಳಿಕೆಗೆ ವಿನೇಶ್ ಪಾತ್ರರಾಗಿದ್ದನ್ನು ಅವರು ಕೊಂಡಾಡಿದ್ದಾರೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೇಳಿದರು.
ಒಲಿಂಪಿಕ್ಸ್ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದ ಸ್ಪರ್ಧೆಯಿಂದ ವಿನೇಶ್ ಅನರ್ಹಗೊಂಡಿದ್ದರು. ಅವರು ಮಿತಿಗಿಂತ 100 ಗ್ರಾಂ ಹೆಚ್ಚುವರಿ ತೂಕ ಹೊಂದಿದ್ದಕ್ಕೆ ಅನರ್ಹಗೊಳಿಸಲಾಯಿತು. ಗ್ರ್ಯಾಂಡ್ ಸ್ಪೋರ್ಟ್ಸ್ ಅಖಾಡದಲ್ಲಿ ಆದ ನೋವಿನಿಂದಾಗಿ ಅವರು ಕುಸ್ತಿಯಿಂದ ನಿವೃತ್ತರಾಗುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದರು.
ತಾತ್ಕಾಲಿಕ ವಿಭಾಗವು ಅನರ್ಹತೆಯ ವಿರುದ್ಧ ವಿನೇಶ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು. ಇದು ಅವರ ಚೊಚ್ಚಲ ಒಲಿಂಪಿಕ್ ಪದಕವನ್ನು ಗೆಲ್ಲುವ ಕನಸನ್ನು ಭಗ್ನಗೊಳಿಸಿತು.