ರೈಲ್ವೆ ಇಲಾಖೆಗೆ ಗುಡ್‌ಬೈ ಹೇಳಿದ ವಿನೇಶ್ ಫೋಗಟ್, ಬಜರಂಗ್ ಪುನಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್;

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್‌ ಫೋಗಟ್‌ ಮತ್ತು ಬಜರಂಗ್ ಪುನಿಯಾ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿನೇಶ್ ಫೋಗಟ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು,’ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ನನ್ನನ್ನು ಹೊರಬರಲು ನಿರ್ಧರಿಸಿದ್ದೇನೆ. ಭಾರತೀಯ ರೈಲ್ವೆಯ ಅಧಿಕಾರಿಗಳಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ.’ ದೇಶಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಭಾರತೀಯ ರೈಲ್ವೆ ಕುಟುಂಬಕ್ಕೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ’ ಎಂದು ತಿಳಿಸಿದ್ದಾರೆ.

ಹರಿಯಾಣ ಚುನಾವಣೆಗೆ ವಿನೇಶ್ ಫೋಗಟ್ ಸ್ಪರ್ಧಿಸಲಿದ್ದಾರೆ.

ಇಬ್ಬರು ಕುಸ್ತಿಪಟುಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸಕ್ಕೆ ಆಗಮಿಸಿ ಬಳಿಕ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!