ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ ವಜಾಗೊಳಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ನಿಗದಿಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕೆ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ. ವಿಭಾಗದ ಫೈನಲ್‌ನಿಂದ ಅನರ್ಹಗೊಳಿಸಲಾಗಿತ್ತು.ಕ್ರೀಡಾಕೂಟದ ಸಂದರ್ಭದಲ್ಲಿ ವಿವಾದ ಪರಿಹಾರಕ್ಕಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ ಸಿಎಎಸ್‌ನ ತಾತ್ಕಾಲಿಕ ವಿಭಾಗಕ್ಕೆ ತಮ್ಮ ವಿರುದ್ಧದ ಕ್ರಮ ಪ್ರಶ್ನಿಸಿ ವಿನೇಶ್ ಆ.9 ರಂದು ಮೇಲ್ಮನವಿ ಸಲ್ಲಿಸಿದ್ದರು.
ಈ ವಿಷಯದ ಬಗ್ಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ನಿರ್ಧಾರವನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಎತ್ತಿಹಿಡಿದಿದೆ.ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 7ನೇ ಪದಕ ಸಾಧನೆ ಮಾಡುವ ಭಾರತದ ಆಸೆ ಭಗ್ನಗೊಂಡಿದೆ.