ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟಿ ಡಾ.ಲೀಲಾವತಿ ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ ‘ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ’ ಎಂದು ವಿನೋದ್ ರಾಜ್ ಹೆಸರಿಟ್ಟಿದ್ದಾರೆ. ಇಂದು (ಡಿ.5) ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ ಹೋಮ, ಹವನ ಮೂಲಕ ಪೂಜೆ ನೆರವೇರಿದೆ.
ಬಹುಭಾಷಾ ನಟಿಯಾಗಿ ಮಿಂಚಿದ ಲೀಲಾವತಿ ಅವರು ಕಳೆದ ವರ್ಷ ಡಿ.8ರಂದು ಇಹಲೋಕ ತ್ಯಜಿಸಿದರು. ಸದಾ ಅಮ್ಮನ ಜೊತೆಯೇ ಇದ್ದು ನೋಡಿಕೊಳ್ಳುತ್ತಿದ್ದ ವಿನೋದ್ ರಾಜ್ ಅವರು ಅಮ್ಮನಿಗಾಗಿ ದೇಗುಲ ಕಟ್ಟಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ