ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಏಪ್ರಿಲ್ 22 ರಂದು ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಚಿತ್ರದುರ್ಗದ ಪ್ರವಾಸಿ ಮಂದಿರದ ಬಳಿ ಧರಣಿ ನಡೆಸಿದಾಗ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಸಂಬಂಧ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಗೋವಿಂದ ಕಾರಜೋಳ ವಿರುದ್ಧ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!