ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಕರಪತ್ರಗಳನ್ನು ಹಂಚಲಾಗಿದೆ ಎಂದು ಆರೋಪಿಸಿ ಪೊಲೀಸ್ ಪೇದೆ ಸಂತೋಷ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಈ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಮತ್ತು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರಾಜಶೇಖರ್ ವಿರುದ್ಧ ಎಫ್‌ಐಆರ್ ದಾಖಲಾಗಿರುವುದರಿಂದ ಗಮನ ಸೆಳೆದಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೌಮ್ಯಾ ರೆಡ್ಡಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.