‘ಲೋಕತಂತ್ರ ಬಚಾವೋ’ ಹೆಸರಿನಲ್ಲಿ ಷರತ್ತು ಉಲ್ಲಂಘಿಸಿದರೆ ಕಠಿಣ ಕ್ರಮ: ಪೊಲೀಸ್ ಇಲಾಖೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರಿ ನಿರ್ದೇಶನಾಲಯವು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದಿರುವ ಕ್ರಮ ಖಂಡಿಸಿ ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಇಂದು ಹಮ್ಮಿಕೊಂಡಿರುವ ‘ಲೋಕತಂತ್ರ ಬಚಾವೋ’ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಕಂಡುಬಂದಿದೆ.

ಷರತ್ತುಗಳ ಮೇಲೆ ಪ್ರತಿಭಟನೆಗೆ ಅವಕಾಶ ನೀಡಲಾಗಿದ್ದು, ಯಾವುದೇ ಮೆರವಣಿಗೆಗೆ ಅವಕಾಶ ಇಲ್ಲ. ಟ್ರಾಕ್ಟರ್ ರ್‍ಯಾಲಿ, ಶಸ್ತ್ರಾಸ್ತ್ರಗಳ ಬಳಕೆಗೆ ಅನುಮತಿ ನೀಡಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪ್ರತಿಭಟನೆಯ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಕಚೇರಿಗಳು ಇರುವ ದೀನದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೈದಾನದ ಬಳಿ ಜನದಟ್ಟಣೆ ವಾಹನ ನಿಯಂತ್ರಿಸಲು ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ. ರ್‍ಯಾಲಿಯಲ್ಲಿ ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ವ್ಯವಸ್ಥೆ ಮಾಡಲಾಗಿದೆ. ಮೈದಾನದಲ್ಲಿ ಏಳು ದ್ವಾರಗಳನ್ನು ಸಿದ್ಧಪಡಿಸಲಾಗಿದ್ದು ಪ್ರವೇಶ ಮತ್ತು ನಿರ್ಗಮನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಈ ಪೈಕಿ ಒಂದು ದ್ವಾರ ವಿಐಪಿಗಳಿಗೆ ಹಾಗೂ ಇನ್ನೊಂದು ದ್ವಾರ ಮಾಧ್ಯಮಗಳಿಗೆ ಮೀಸಲಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!