ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಆಶಾ, ಅಂಗನವಾಡಿ ಕಾರ್ಯಕರ್ತೆಯರ ಜೊತೆ ಲಕ್ಷ್ಮೀ ಹೆಬ್ಬಾಳ್ಕರ್ ಸಭೆ

ಹೊಸದಿಗಂತ , ಬೆಳಗಾವಿ:

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.

ಬೆಳಗಾವಿಯ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಚುನಾವಣಾ ಅಧಿಕಾರಿಗಳು, ಪ್ಲಾಯಿಂಗ್ ಸ್ಕಾಡ್ ಸಿಬ್ಬಂದಿ ಸಭೆ ಮೊಟಕುಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ 500 ಜನ ಆಶಾ, ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಚಿವರು ಸಭೆ ನಡೆಸಿದ್ದಾರೆ. ಸಾಕ್ಷಿಗಾಗಿ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!