ವಿದೇಶಿ ಧನಸಹಾಯ ಕಾನೂನು ಉಲ್ಲಂಘನೆ: ರಾಜೀವ್ ಗಾಂಧಿ ಫೌಂಡೇಶನ್‌ನ ಎಫ್‌ಸಿಆರ್‌ಎ ಪರವಾನಗಿ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ವಿದೇಶಿ ಧನಸಹಾಯ ಕಾನೂನನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜೀವ್ ಗಾಂಧಿ ಪ್ರತಿಷ್ಠಾನದ (ಆರ್‌ಜಿಎಫ್) ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ಗೃಹ ಸಚಿವಾಲಯ (ಎಂಎಚ್‌ಎ) ಶನಿವಾರ ರದ್ದುಗೊಳಿಸಿದೆ.

ರಾಜೀವ್ ಗಾಂಧಿ ಫೌಂಡೇಶನ್ ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಸರ್ಕಾರೇತರ ಸಂಸ್ಥೆಯಾಗಿದೆ.

ಮೂಲಗಳ ಪ್ರಕಾರ, ಜುಲೈ 2020 ರಲ್ಲಿ, MHA ಸಮಿತಿಯನ್ನು ರಚಿಸಿತು ಮತ್ತು ಅದರ ವರದಿಯನ್ನು ಆಧರಿಸಿ, ಪ್ರತಿಷ್ಠಾನವನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದುಪಡಿಸುವ ಕುರಿತು ನೋಟೀಸನ್ನು ಆರ್‌ಜಿಎಫ್‌ನ ಪದಾಧಿಕಾರಿಗಳಿಗೆ ಕಳುಹಿಸಲಾಗಿದೆ.

ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರ್‌ಜಿಎಫ್‌ನ ಅಧ್ಯಕ್ಷರಾಗಿದ್ದರೆ, ಇತರ ಟ್ರಸ್ಟಿಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಮತ್ತು ಸಂಸತ್ ಸದಸ್ಯರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!