ಮಾನವ ಹಕ್ಕುಗಳ ಉಲ್ಲಂಘನೆ: ಶ್ರೀಲಂಕಾ ಮಾಜಿ ಅಧ್ಯಕ್ಷ ರಾಜಪಕ್ಸೆ ಸೇರಿ ನಾಲ್ವರಿಗೆ ‘ನೋ ಎಂಟ್ರಿ’ ಎಂದ ಕೆನಡಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾನವ ಹಕ್ಕುಗಳ ಉಲ್ಲಂಘನೆ ಸಂಬಂಧಿಸಿ ಶ್ರೀಲಂಕಾ ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ಮತ್ತು ಅವರ ಸಹೋದರ ಮಹಿಂದಾ ರಾಜಪಕ್ಸೆ ಸೇರಿದಂತೆ ನಾಲ್ವರು ಅಧಿಕಾರಿಗಳ ಮೇಲೆ ಕೆನಡಾ ನಿರ್ಬಂಧ ವಿಧಿಸಿದೆ ಎಂದು ಕೆನಡಾದ ವಿದೇಶಾಂಗ ಸಚಿವಾಲಯ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

1983 ರಿಂದ 2009 ರವರೆಗೆ ಶ್ರೀಲಂಕಾದಲ್ಲಿ ನಡೆದ ಸಶಸ್ತ್ರ ಸಂಘರ್ಷದ ಸಮಯದಲ್ಲಿ ಮಾನವ ಹಕ್ಕುಗಳ ಸಂಪೂರ್ಣ ಮತ್ತು ವ್ಯವಸ್ಥಿತ ಉಲ್ಲಂಘನೆಗಾಗಿ ನಾಲ್ವರು ಅಧಿಕಾರಿಗಳ ವಿರುದ್ಧ ಈ ನಿರ್ಬಂಧಗಳನ್ನು ವಿಧಿಸಲಾಗಿದೆ.

ಇವರ ಜೊತೆಗೆ ಸ್ಟಾಫ್ ಸಾರ್ಜೆಂಟ್ ಸುನಿಲ್ ರತ್ನಾಯಕೆ ಮತ್ತು ಲೆಫ್ಟಿನೆಂಟ್ ಕಮಾಂಡರ್ ಚಂದನಾ ಪಿ ಹೆಟ್ಟಿಯಾರಾಚಿತೆ ಅವರಿಗೂ ನಿರ್ಬಂಧಗಳನ್ನು ವಿಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!