ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿದೆ.
ಏ.13 ರಂದು ಬಿಜೆಪಿ ತುಮಕೂರು ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ವಿ. ಸೋಮಣ್ಣ ಪರ ಪ್ರಚಾರ ಮಾಡುವಾಗ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಕೊತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು. ಡಿ.ಕೆ.ಸುರೇಶ್ ದೇಶ ಮತ್ತು ರಾಜ್ಯವನ್ನು ಉಳಿಸುತ್ತಾರಾ? ಹಣದ ದಾಹಕ್ಕೆ ಏನು ಬೇಕಾದರೂ ಮಾಡುತ್ತಾರೆ” ಎಂದು ಟೀಕಿಸಿದ್ದರು.
ಚುನಾವಣಾ ಪ್ರಚಾರದ ವೇಳೆ ಎಸ್.ಎಫ್.ಟಿ. ಚುನಾವಣಾ ಕರ್ತವ್ಯದಲ್ಲಿದ್ದ ಮಹೇಶ್ ,ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಬೆಂಗಳೂರಿನ 42ನೇ ಹೆಚ್ಚುವರಿ ಸಿಎಂಎಂ ನ್ಯಾಯಾಲಯದ ಆದೇಶದ ಮೇರೆಗೆ ಎಫ್‌ಐಆರ್ ದಾಖಲಾಗಿದೆ.