ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮೇ ತಿಂಗಳಿನಲ್ಲಿ ವಿಜಯನಗರದ ಹರಪನಹಳ್ಳಿ ಪಟ್ಟಣದಲ್ಲಿ ಪಕ್ಷದ ಪರ ಪ್ರಚಾರ ನಡೆಸುವ ವೇಳೆ ನಡ್ಡಾ ಅವರು ಮತದಾರರಿಗೆ ಆಮಿಷ ಒಡ್ಡಿದರು ಎಂದು ಆರೋಪಿಸಲಾಗಿತ್ತು.
ಇತ್ತ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ನಡ್ಡಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತನಿಖೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.
ಅಲ್ಲದೆ, ಮುಂದಿನ ವಿಚಾರಣೆಯನ್ನು ಜೂನ್ 21ಕ್ಕೆ ಮುಂದೂಡಿದೆ.