ರಾಜ್ಯ ಸರ್ಕಾರದಿಂದ ಪ್ರೋಟೋಕಾಲ್ ಉಲ್ಲಂಘನೆ: ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಚ್.ಡಿ.ಕುಮಾರಸ್ವಾಮಿ ರಾಜ್ಯ ಪ್ರವಾಸದ ವೇಳೆ ಕೇಂದ್ರ ಸಚಿವರ ಶಿಷ್ಟಾಚಾರ ಪಾಲಿಸದೆ ಸರ್ಕಾರ ಎಡವಟ್ಟು ಮಾಡಿದೆ ಎನ್ನಲಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸಕ್ಕೆ ಕಾರು ನೀಡದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕುಮಾರಸ್ವಾಮಿ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಾಹನದಲ್ಲೇ ಮಂಡ್ಯ, ಮೈಸೂರು ಜಿಲ್ಲೆ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಡೆಗೆ ಮಂಡ್ಯದ ಕೆ.ಆರ್.ಪೇಟೆಯಲ್ಲಿ ​ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!