ನಿಯಮ ಉಲ್ಲಂಘನೆ: ಏರ್ ಇಂಡಿಯಾಕ್ಕೆ 80 ಲಕ್ಷ ದಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಏರ್ ಇಂಡಿಯಾಕ್ಕೆ ಇಂದು (ಶುಕ್ರವಾರ) ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ₹80 ಲಕ್ಷ ದಂಡ ವಿಧಿಸಿದೆ.

ವಿಮಾನದ ಕರ್ತವ್ಯದ ಸಮಯ ಮಿತಿಗಳು ಮತ್ತು ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಗಾಗಿ ಡಿಜಿಸಿಎಯು ಜನವರಿಯಲ್ಲಿ ಏರ್ ಇಂಡಿಯಾದ ಸ್ಪಾಟ್ ಆಡಿಟ್ ಅನ್ನು ನಡೆಸಿತ್ತು. ಆಗ ಸಂಗ್ರಹಿಸಲಾಗಿದ್ದ ಸಾಕ್ಷಾಧಾರಗಳು ಆಧಾರದ ಮೇಲೆ ದಂಡ ವಿಧಿಸಿದೆ.

ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್‌ (ಎಫ್‌ಡಿಟಿಎಲ್‌) ಮತ್ತು ವಿಮಾನ ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿರುವುದು ಸಾಬೀತಾಗಿದೆ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ಹೇಳಿದೆ.

ಈ ಕಾರಣಗಳಿಂದಾಗಿ ಮಾರ್ಚ್ 1ರಂದು ಏರ್ ಇಂಡಿಯಾಕ್ಕೆ ಶೋಕಾಸ್ ನೋಟಿಸ್ ಕೂಡ ನೀಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!