ಮತದಾನ ಗೌಪ್ಯತೆ ಉಲ್ಲಂಘನೆ: ಎರಡು ಪ್ರಕರಣ ದಾಖಲು

ಹೊಸದಿಗಂತ ವರದಿ, ಹಾವೇರಿ:

ಮತದಾನದ ಗೌಪ್ಯತೆ ಕಾಪಾಡುವುದು ಪ್ರತಿ ನಾಗರೀಕನ ಕರ್ತವ್ಯ. ಆದರೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಗೌಪ್ಯತೆ ಉಲ್ಲಂಘನೆ ಮಾಡಿದ್ದಕ್ಕಾಗಿ ಎರಡು ಪ್ರಕರಣಗಳು ದಾಖಲಾಗಿವೆ.

ಮತಗಟ್ಟೆಗೆ ಮೊಬೈಲ್ ಒಯ್ಯುವುದನ್ನು ನಿಷೇಧಿಸಲಾಗಿದೆ. ಆದಾಗ್ಯೂ ಗದಗ ಜಿಲ್ಲೆ ಲಕ್ಷ್ಮೇಶ್ಚರ ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ಮತಗಟ್ಟೆ 157 ರಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ತಾನು ಮತದಾನ ಮಾಡಿದ ಸಂಪೂರ್ಣ ಕಾರ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದನು. ಅಲ್ಲದೇ ಈ ಕುರಿತು ಖಾಸಗಿ ಯೂಟ್ಯೂಬ್ ಚಾನೆಲ್ ಒಂದು ಸುದ್ದಿ ಮಾಡಿದ ಹಿನ್ನೆಲೆಯಲ್ಲಿ ಅನಾಮಧೇಯ ವ್ಯಕ್ತಿ ಮತ್ತು ಯೂಟ್ಯೂಬ್ ಚಾನೆಲ್ ವಿರುದ್ದ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಾಗಿದೆ.

ಅಲ್ಲದೇ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹನುಮರಹಳ್ಳಿ ಗ್ರಾಮದ ಮತಗಟ್ಟೆ 122ರಲ್ಲಿ ಲಿಂಗರಾಜ ಸೋಮಲಿಂಗಪ್ಪ ಆಡಿನ ತಾನು ಮತದಾನ ಮಾಡಿದ ಸಂಪೂರ್ಣ ಕಾರ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದನು. ಈ ಕುರಿತು ಶಿಗ್ಗಾಂವಿ ಪೊಲೀಸ್‌ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಈ ಮೂಲಕ ಜಿಲ್ಲೆಯಲ್ಲಿ ಮತದಾನ ಗೌಪ್ಯತೆ ಉಲ್ಲಂಘನೆಯ ಎರಡು ಪ್ರಕರಣ ದಾಖಲಾಗಿವೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!