ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಇಂಫಾಲ್‌ನಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ಎರಡು ಸಮಯದಾಯಗಳ ನಡುವೆ ನಡೆದ ಫೈರಿಂಗ್‌ನಲ್ಲಿ 22 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ಇಬ್ಬಿಬ್ಬರಿಗೂ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಸಗೋಲ್ಸೆಮ್ ಲೋಯಾ ಎಂದು ಗುರುತಿಸಲಾಗಿದ್ದು, ಗುಂಡು ಬಿದ್ದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಇಂಫಾಲ್‌ನ ಪೂರ್ವ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಎರಡು ಸಮುದಾಯಗಳ ನಡುವೆ ಗಲಭೆ ನಡೆದಿದ್ದು, ಭದ್ರತಾ ಸಿಬ್ಬಂದಿಗಳು ಪರಿಸ್ಥಿತಿ ನಿಯಂತ್ರಿಸಿದ್ದಾರೆ.