ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿರಿಬಾಮ್ ಜಿಲ್ಲೆಯ ಹಳ್ಳಿಯೊಂದರ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದರಿಂದ ಮಣಿಪುರದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ, ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಿಆರ್‌ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.