ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರು ಮೃತಪಟ್ಟಿದ್ದಾರೆ.
ಕಂಗ್ಪೋಪ್ಕಿ ಜಿಲ್ಲೆಯಲ್ಲಿ ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಮೂವರು ಮೃತಪಟ್ಟಿದ್ದಾರೆ.
ವಾಹನಗಳಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿಭಾಗದ ಇರೆಂಗ್ ಮತ್ತು ಕರಮ್ ಪ್ರದೇಶದ ನಡುವಣ ಗ್ರಾಮಗಳಲ್ಲಿ ವಾಸಿಸುತ್ತಿದ್ದವರ ಮೇಲೆ ದಾಳಿ ನಡೆಸಿದ್ದಾರೆ.