ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಮತ್ತೆ ಘರ್ಷಣೆ ಭುಗಿಲೆದಿದ್ದು, ಈ ಹಿನ್ನೆಲೆ ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಸೆಪ್ಟೆಂಬರ್ 11, ಬುಧವಾರ ಮತ್ತು ಸೆಪ್ಟೆಂಬರ್ 12, ಗುರುವಾರ ಮುಚ್ಚುವಂತೆ ನಿರ್ದೇಶನ ನೀಡಿದೆ.
ರಾಜ್ಯ ಸರ್ಕಾರದ ಭದ್ರತಾ ಸಲಹೆಗಾರ ಮತ್ತು ಡಿಜಿಪಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿ ಇಂಫಾಲ್‌ನ ರಾಜಭವನದತ್ತ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದ ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಅಶ್ರುವಾಯು ಪ್ರಯೋಗಿಸಲಾಗಿದೆ.
ಈ ವೇಳೆ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಮಣಿಪುರ ಸರ್ಕಾರ ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಮತ್ತು ಥೌಬಲ್‌ನಲ್ಲಿ BNSS ನ ಸೆಕ್ಷನ್ 163 (2) ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.
ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ ನಡುವೆ ರಾಜ್ಯ ಸರ್ಕಾರವು ಇಡೀ ರಾಜ್ಯದಲ್ಲಿ ಐದು ದಿನಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ದ್ವೇಷ ಭಾಷಣ ಮತ್ತು ದ್ವೇಷದ ವೀಡಿಯೊಗಳನ್ನು ಪ್ರಸಾರ ಮಾಡಲು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ತ