ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲ್ ಪೂರ್ವ (Imphal East) ಮತ್ತು ಕಾಂಗ್‌ಪೋಕ್ಪಿ (Kangpokpi )ಜಿಲ್ಲೆಗಳ ಪರಿಧಿಯ ಪ್ರದೇಶದಲ್ಲಿ ಗುಂಡಿನ ದಾಳಿಗೆ ಇಬ್ಬರು ಸಾವಿಗೀಡಾಗಿದ್ದಾರೆ .
ವರದಿಗಳ ಪ್ರಕಾರ, ಕಾಂಗ್‌ಪೋಕ್ಪಿ ಮತ್ತು ಇಂಫಾಲ್ ಪಶ್ಚಿಮದ ಪಕ್ಕದ ಪ್ರದೇಶಗಳಾದ ಕೌಟ್ರುಕ್‌ನಲ್ಲಿ ಇಂದು ಮಧ್ಯಾಹ್ನ 2:30 ರ ಸುಮಾರಿಗೆ ಗುಂಡಿನ ದಾಳಿ ನಡೆದಿದೆ.ಘಟನೆಯ ಸಂದರ್ಭದಲ್ಲಿ ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗ್ರಾಮದ ಸ್ವಯಂಸೇವಕರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರಿಬ್ಬರನ್ನು ನಾಂಗ್‌ತೊಂಬಮ್ ಮೈಕೆಲ್ (33) ಮತ್ತು ಮೈಸ್ನಮ್ ಖಬಾ (23) ಎಂದು ಗುರುತಿಸಲಾಗಿದೆ. ಇದೇ ವೇಳೆ ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿರುವ RIMS ಆಸ್ಪತ್ರೆಗೆ ಕಳುಹಿಸಲಾಗಿದೆ.