ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಇದು ಮಾನವ ಕುಲ ತಲೆ ತಗ್ಗಿಸುವ ಕೃತ್ಯವಿದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಗಾಯಾಳು ಮಹಿಳೆಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಗೆ ಧೈರ್ಯ ತುಂಬಿದರು.
ಇಡೀ ಮಾನವ ಕುಲ ತಲೆತಗ್ಗಿಸುವ ಘಟನೆ ಇದು. ನನ್ನ ತಾಲೂಕಿನಲ್ಲಿ ಇಂತಹ ಘಟನೆ ನಡೆದಿರುವು ನಿಜಕ್ಕೂ ಖೇದಕರ ಎಂದು ಹೇಳಿದರು. ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.