ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸಲ್ಲ: ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಅಮಿತ್‌ ಶಾ ಪ್ರತಿಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ವಿವಾದದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್‌ ರೇವಣ್ಣ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಅವರು ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ? ಜೆಡಿಎಸ್ ಕೂಡ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಅವಮಾನಿಸಬಾರದು. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದರು.

ನಾವು ದೇಶದ ಮಾತೃಶಕ್ತಿಯೊಂದಿಗಿದ್ದೇವೆ, ಮಹಿಳಾ ಶಕ್ತಿಯೊಂದಿಗೆ ನಿಲ್ಲುತ್ತೇವೆ ಎಂಬುದು ಭಾರತೀಯ ಜನತಾ ಪಕ್ಷದ ನಿಲುವು ಸ್ಪಷ್ಟವಾಗಿದೆ. ಮಾತೃಶಕ್ತಿಗೆ ಮಾಡಿದ ಅವಮಾನವನ್ನು ಎಂದೂ ಸಹಿಸುವುದಿಲ್ಲ ಎಂಬ ಬದ್ಧತೆಯನ್ನು ನರೇಂದ್ರ ಮೋದಿಯವರು ಹೊಂದಿದ್ದಾರೆ. ಮೊದಲು ಈ ಬಗ್ಗೆ ಕ್ರಮ ಕೈಗೊಳ್ಳಿ, ಮಹಿಳೆಯರ ಅವಮಾನ ತಡೆಯುವುದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!