March 23, 2026
Monday, March 23, 2026
spot_img

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವು ಮನೆಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದಲ್ಲಿ ಹಿಂಸಾಾರ ಮತ್ತೆ ಭುಗಿಲೆದ್ದಿದೆ. ಉಖ್ರುಲ್ ಜಿಲ್ಲೆಯಲ್ಲಿ ತಂಗ್ಖುಲ್ ನಾಗಾ ಸಮುದಾಯದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಬಳಿಕ ಗುಂಪು ಘರ್ಷಣೆ ಭುಗಿಲೆದ್ದಿದೆ.

ಉಖ್ರುಲ್ ಜಿಲ್ಲೆಯ ಲಿಟನ್ ಸರೈಖಾಂಗ್‌ನಲ್ಲಿ ಭಾನುವಾರ ಸಂಜೆ ಕುಕಿ ಸಮುದಾಯದ ಗುಂಪೊಂದು ತಂಗ್ಖುಲ್ ನಾಗಾ ಸಮುದಾಯದ ಸದಸ್ಯರ ಮೇಲೆ ದಾಳಿ ನಡೆಸಿ ಹಲವಾರು ಮನೆಗಳಿಗೆ ಬೆಂಕಿ ಹೆಚ್ಚಿದೆ. ಇದರಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಎರಡು ಬುಡಕಟ್ಟು ಗುಂಪುಗಳ ಮಧ್ಯೆ ತೀವ್ರವಾದ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳೀಯ ಆಡಳಿತವು ನಿಷೇಧಾಜ್ಞೆ ಜಾರಿಗೊಳಿಸಿದೆ . ಯಾವುದೇ ವ್ಯಕ್ತಿ ತಮ್ಮ ಮನೆಯಿಂದ ಹೊರಗೆ ಓಡಾಡುವುದು, ಶಾಂತಿಗೆ ಭಂಗ ತರುವ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಅನುಮಾನಾಸ್ಪದ ವ್ಯಕ್ತಿಗಳ ಚಲನವಲನದ ಮೇಲೆ ನಿಗಾ ಇರಿಸಲು ಮಹಾದೇವ್, ಲಂಬುಯಿ, ಶಾಂಗ್‌ಕೈ ಮತ್ತು ಇತರ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಲಿಟನ್ ಸರೈಖಾಂಗ್ ಗ್ರಾಮದಲ್ಲಿ ಘರ್ಷಣೆ ನಡೆಸಿದ ಎರಡು ಬುಡಕಟ್ಟು ಗುಂಪುಗಳನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಹಾರಿಸಿವೆ ಎಂದು ಅವರು ತಿಳಿಸಿದರು.

ತಂಗ್‌ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ಗುಂಪಿನ ನಡುವೆ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಗ್ರಾಮದಲ್ಲಿ ಮತ್ತೆ ಶಾಂತಿ ಸುವ್ಯವಸ್ಥೆಗೆ ಭಂಗವಾಗುವ ಆತಂಕವಿದೆ. ಭಾನುವಾರ ಸಂಜೆ 7 ಗಂಟೆಯಿಂದ ಮುಂದಿನ ಆದೇಶದವರೆಗೆ ಯಾರೂ ಕೂಡ ನಿವಾಸದ ಹೊರಗೆ ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಸರ್ಕಾರಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಉಖ್ರುಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ದಾಸ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !