ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೂದಿಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ ಇದೀಗ ಮತ್ತೆ ಗುಂಡಿನ ಸದ್ದು ಕೇಳಿಸಿದೆ.
ಜನಾಂಗೀಷ ಸಂಘರ್ಷದಿಂದಾಗಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಇಂಫಾಲ್ ಪಶ್ಚಿಮ ಜಿಲ್ಲೆಯ ಸಿಂಗ್ಡಾ ಹಾಘೂ ಕಾಂಗ್ಚುಪ್ ನಡುವಿನ ಹಳ್ಳಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿ 10 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಲ್ಯಾಫೆಲ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೈನಿಕರ ಸಂಬಂಧಿಯೊಬ್ಬರ ಸಹಿತ ನಾಲ್ವರನ್ನು ಅಪಹರಣ ಮಾಡಲಾಗಿದ ಎನ್ನುವ ಸುದ್ದಿ ಹರಡುತ್ತಿದ್ದಂತೆಯೇ ಕುಕಿ ಉಗ್ರರು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ.