Monday, October 2, 2023

Latest Posts

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: 10 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಣಿಪುರದಲ್ಲಿ ಮತ್ತೆ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಕಳೆದ 24 ಗಂಟೆಗಳಲ್ಲಿ ಕನಿಷ್ಟ 10 ಮಂದಿ ಸಾವನ್ನಪ್ಪಿದ್ದಾರೆ. ಹಿಂಸಾಚಾರದ ಬೆನ್ನಲ್ಲೇ ಸೇನಾ ತುಕಡಿಗಳ ಮೇಲೆ ಪದೇ ಪದೇ ದಾಳಿ ನಡೆಯುತ್ತಿರುವ ಜಿಲ್ಲೆಗಳಲ್ಲಿ ಗುಂಡು ನಿರೋಧಕ ವಾಹನಗಳಲ್ಲಿ ಸೇನೆ, ಕ್ಷೇತ್ರ ಪ್ರಾಬಲ್ಯ ಕಾರ್ಚಾಚರಣೆ ನಡೆದಿದೆ.

ರಾಜ್ಯದಲ್ಲಿ ಹಿಂಸೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ತಕ್ಷಣವೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ದೇಶೀಯ ಬುಡಕಟ್ಟು ಜನಾಂಗದ ಮುಖಂಡರ ವೇದಿಕೆ ಆಗ್ರಹಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯ ಮುನ್ನ ಹಿಂಸಾಚಾರ ನಡೆದಿದೆ. ಈ ನಡುವೇ ಕಳೆದ ನಾಲ್ಕು ದಿನಗಳಿಂದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕನಿಷ್ಠ 33 ಶಸ್ತ್ರಸಜ್ಜಿತ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂಫಾಲ್ ಪೂರ್ವ, ಬಿಷ್ಣುಪುರ್ ಮತ್ತು ಚುರಾಚಂದ್‌ಪುರ ಜಿಲ್ಲೆಗಳ ಗಡಿಯಲ್ಲಿನ ಪ್ರದೇಶಗಳಲ್ಲಿಯೂ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!