ಹೊಸ ದಿಗಂತ ಆನ್ ಲೈನ್ ಡೆಸ್ಕ್:
ನಂದಿಗ್ರಾಮ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ನಡೆದ ಹಲ್ಲೆಯನ್ನು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ಸಹೋದರಿ, ಸಹೋದ್ಯೋಗಿ ಮಮತಾ ಬ್ಯಾನರ್ಜಿ ಆರೋಗ್ಯದ ಬಗ್ಗೆ ತುಂಬಾ ಕಾಳಜಿ ಇದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ನಾವೆಲ್ಲರೂ ಚುನಾವಣೆಯಲ್ಲಿ ಹೋರಾಡುತ್ತೇವೆ. ಚುನಾವಣೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಈ ರೀತಿಯ ಹಿಂಸಾಚಾರಗಳು ಪ್ರಜಾಪ್ರಭುತ್ವದ ಮನೋಭಾವವನ್ನು ನಾಶಪಡಿಸುತ್ತದೆ. ಎಲ್ಲವೂ ಸರಿಯಾಗಿ ಅವರಿಗೆ ಒಳಿತಾಗಲಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
I am very much concerned about the health condition of my sister and colleague @MamataOfficial. I wish her a quick recovery. We all fight elections. We win some lose some, but violence corrodes the spirit of democracy. Hope all sides will observe restraint. @AITCofficial
— H D Devegowda (@H_D_Devegowda) March 11, 2021