ಡಬ್ಲಿನ್ ನಲ್ಲಿ ಮಕ್ಕಳಿಗೆ ಚಾಕು ಇರಿತ: ಭುಗಿಲೆದ್ದ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಶಾಲೆಯೊಂದರ ಹೊರಭಾಗದಲ್ಲಿ ಮೂವರು ಮಕ್ಕಳಿಗೆ ಚಾಕುವಿನಿಂದ ಇರಿದಿರುವ ಘಟನೆ ಐರ್ಲೆಂಡ್‌ ರಾಜಧಾನಿ ಡಬ್ಲಿನ್‌ನಲ್ಲಿ ಗುರುವಾರ ನಡೆದಿದೆ. ಇದರಿಂದಾಗಿ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಡಬ್ಲಿನ್‌ನ ಪಾರ್ನೆಲ್ ಸ್ಕ್ವೇರ್ ಈಸ್ಟ್​ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮಕ್ಕಳು ಮತ್ತು ಇಬ್ಬರು ವಯಸ್ಕರು ಗಾಯಗೊಂಡಿದ್ದಾರೆ. ಈ ಪೈಕಿ 5 ವರ್ಷದ ಬಾಲಕಿ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಕಾನ್ನೆಲ್ ಸೇತುವೆ ಬಳಿ ಕಾರುಗಳು ಹಾಗೂ ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಸಮೀಪದ ಅಂಗಡಿಗಳಿಗೆ ನುಗ್ಗಿ ವಸ್ತುಗಳನ್ನು ದೋಚಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!