ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಭತ್ತದ ಗದ್ದೆಯಲ್ಲೇ ನಾಗಾ ಗ್ರಾಮಸ್ಥರ ಮೇಲೆ ಗುಂಡಿನ ದಾಳಿ; ಓರ್ವ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಣಿಪುರ, ನಾಗಾಲ್ಯಾಂಡ್ ಮತ್ತು ಅಸ್ಸಾಂ ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನು ಎಲ್ಲಾ ಸಮುದಾಯಗಳ ಓಡಾಟಕ್ಕಾಗಿ ಮುಕ್ತಗೊಳಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿದ ಕೆಲವೇ ದಿನಗಳಲ್ಲಿ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ನಾಗಾ ಸಮುದಾಯದ ಒಬ್ಬ ಗ್ರಾಮಸ್ಥ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಜಧಾನಿ ಇಂಫಾಲದಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿರುವ, ಕುಕಿ ಸಮುದಾಯದ ಪ್ರಾಬಲ್ಯ ಹೊಂದಿರುವ ಕಾಂಗ್ಪೋಕ್ಪಿ ಜಿಲ್ಲೆಯ ‘ಲಂಗ್ಕಾ ನಾಗಾ’ ಗ್ರಾಮದಲ್ಲಿ … Continue reading ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಭತ್ತದ ಗದ್ದೆಯಲ್ಲೇ ನಾಗಾ ಗ್ರಾಮಸ್ಥರ ಮೇಲೆ ಗುಂಡಿನ ದಾಳಿ; ಓರ್ವ ಸಾ*ವು