ಅಲಹಾಬಾದ್ ವಿಶ್ವವಿದ್ಯಾನಿಲಯದಲ್ಲಿ ಹಿಂಸಾಚಾರ: ವಿದ್ಯಾರ್ಥಿ- ಪೊಲೀಸರ ನಡುವೆ ಘರ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಲಹಾಬಾದ್ ವಿಶ್ವವಿದ್ಯಾನಿಲಯದಲ್ಲಿ ಇಂದುಸಂಜೆ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ನಡೆದಿದ್ದು, ಅದು ಹಿಂಸಾಚಾರಕ್ಕೆ ತಿರುಗಿದೆ.

ವಿದ್ಯಾರ್ಥಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೋಟಾರ್ ಸೈಕಲ್‌ಗೆ ಬೆಂಕಿ ಹಚ್ಚಲಾಗಿದೆ.ಇದರಿಂದ ರಡೂ ಕಡೆಯವರು ಗಾಯಗೊಂಡಿದ್ದಾರೆ.

ವಿಶ್ವವಿದ್ಯಾನಿಲಯದಲ್ಲಿ ಶುಲ್ಕ ಹೆಚ್ಚಳದ ವಿರುದ್ಧ ತಿಂಗಳ ಕಾಲ ಪ್ರತಿಭಟನೆಯ ಭಾಗವಾಗಿರುವ ವಿದ್ಯಾರ್ಥಿ ನಾಯಕರೊಬ್ಬರು ಕ್ಯಾಂಪಸ್‌ನಲ್ಲಿರುವ ಬ್ಯಾಂಕ್‌ಗೆ ಹೋಗಲು ಬಯಸಿದ್ದರು. ಆದರೆ ಸಿಬ್ಬಂದಿ ಆತನನ್ನು ಒಳಗೆ ಬಿಡಲಿಲ್ಲ. ಇದು ವಾಗ್ವಾದಕ್ಕೆ ಕಾರಣವಾಯಿತು ಎಂದು ಹೇಳಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪೊಲೀಸರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ವಿಶ್ವವಿದ್ಯಾನಿಲಯದಲ್ಲಿ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕಳೆದ 101 ದಿನಗಳಿಂದ ವಿದ್ಯಾರ್ಥಿಗಳು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!