ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಘರ್ಷಣೆಗಳು ಹೆಚ್ಚುತ್ತಿದ್ದು,ಈ ಹಿನ್ನೆಲೆಯಲ್ಲಿ ಸುಮಾರು 6,700 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ.
ವಿವಾದಾತ್ಮಕ ಉದ್ಯೋಗ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಶೇಖ್ ಹಸೀನಾ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ಭದ್ರತಾ ಪಡೆಗಳೊಂದಿಗೆ ಸಂಘರ್ಘ ಉಂಟಾಗಿದ್ದು, ವಾರ ಕಳೆದರೂ ಪರಿಸ್ಥಿತಿ ಇನ್ನೂ ಸಹಜ ಸ್ಥಿತಿಗೆ ಮರಳಿಲ್ಲ. ಹೀಗಾಗಿ ಇದುವರೆಗೆ 6,700 ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಬಾಂಗ್ಲಾದೇಶದ ನೆರೆಯ ಮಿತ್ರ ರಾಷ್ಟ್ರವಾಗಿರುವುದರಿಂದ ಆ ದೇಶದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಭಾವಿಸುವುದಾಗಿ ತಿಳಿಸಿದ್ದಾರೆ.