ಬಂಗಾಳದಲ್ಲಿ ಹಿಂಸಾಚಾರ: ಮೃತಪಟ್ಟ 19 ಜನರ ಕುಟುಂಬಗಳಿಗೆ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಯ ವೇಳೆ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ 19 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಮೃತರು ಯಾವ ಪಕ್ಷಕ್ಕೆ ಸೇರಿದವರು ಎಂಬುದರ ಆಧಾರದ ಮೇಲೆ ಸರ್ಕಾರ ತಾರತಮ್ಯ ಮಾಡುವುದಿಲ್ಲ .ಸಾವನ್ನಪ್ಪಿದ 19 ಜನರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನ ನೀಡಲಾಗುವುದು ಮತ್ತು ಅವರ ಸಂಬಂಧಿಕರಿಗೆ ಸರ್ಕಾರದಿಂದ ಹೋಮ್ ಗಾರ್ಡ್ ಕೆಲಸವನ್ನ ನೀಡಲಾಗುವುದು. 19 ಮಂದಿಯಲ್ಲಿ 10 ಮಂದಿ ಟಿಎಂಸಿ ಕಾರ್ಯಕರ್ತರು. ಉಳಿದವರನ್ನು ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!