ಹೊಸದಿಗಂತ ಡಿಜಿಟಲ್ ಡೆಸ್ಕ್ :
ಸಸಾರಾಮ್ ಮತ್ತು ಬಿಹಾರ್ ಷರೀಫ್ ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ಮೃತರ ಕುಟುಂಬಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬಿಹಾರ ಶರೀಫ್‌ನ ಲಾಹೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಗಗನ್ ದಿವಾನ್ ಮೊಹಲ್ಲಾ ಬಳಿ ರಾಮನವಮಿ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದ ಒಂದು ದಿನದ ನಂತರ, ಬಿಹಾರದ ನಳಂದ ಜಿಲ್ಲೆ ಮತ್ತು ರೋಹ್ತಾಸ್ ಜಿಲ್ಲೆಯ ಸಸಾರಾಮ್ ಪಟ್ಟಣದಲ್ಲಿ ಶನಿವಾರ ಸಂಜೆ ಮತ್ತೊಂದು ಘರ್ಷಣೆ ಸಂಭವಿಸಿದೆ. ಇದರಲ್ಲಿ ಒಬ್ಬರು ಸಾವನ್ನಪ್ಪಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ.
ಎರಡು ಗುಂಪುಗಳು ಕಲ್ಲು ತೂರಾಟ ಮತ್ತು ಪರಸ್ಪರ ಗುಂಡು ಹಾರಿಸಲಾಗಿದೆ. ಇಬ್ಬರಿಗೆ ಗಾಯಗಳಾಗಿವೆ. ಸಸಾರಂನಲ್ಲಿ ಬಾಂಬ್ ಸ್ಫೋಟದಲ್ಲಿ ಆರು ಜನರು ಗಾಯಗೊಂಡರು.
ಗಯಾ ಮತ್ತು ನೌಗಾಚಿಯಾದಿಂದ ರಾಮನವಮಿ ಮೆರವಣಿಗೆಯಲ್ಲಿ ಕಲ್ಲು ತೂರಾಟದ ಮತ್ತೊಂದು ಘಟನೆ ವರದಿಯಾಗಿದೆ.ಬಿಹಾರದ ಹಲವು ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ನಳಂದಾ ಮತ್ತು ಸಸಾರಂನಲ್ಲಿಯೂ ಸೆಕ್ಷನ್ 144 ವಿಧಿಸಲಾಗಿದೆ.