ದೆಹಲಿಯ ಹಿಂಸಾಚಾರ: ತನಿಖಾಧಿಕಾರಿಗಳ ಮೇಲೆ ಕಲ್ಲು ತೂರಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿಯ ಜಹಾಂಗಿರ್‌ಪುರಿ ಪ್ರದೇಶದಲ್ಲಿ ಹನುಮಾನ್ ಜನ್ಮೋತ್ಸವ ಮೆರವಣಿಗೆಯ ಸಮಯದಲ್ಲಿ ನಡೆದ ಎರಡು ಗುಂಪುಗಳ ಮಧ್ಯೆ ಘರ್ಷಣೆಯಲ್ಲಿ ಕಲ್ಲು ತೂರಾಟ ನಡೆಸಿದ್ದ ಪರಿಣಾಮ ಕೆಲ ಪೊಲೀಸರು ಗಾಯಗೊಂಡಿದ್ದು, ವಾಹನಗಳು ಜಖಂಗೊಂಡಿದ್ದವು. ಇದೀಗ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ನಡೆಸುತ್ತಿದೆ.
ಹಿಂಸಾಚಾರದ ವೇಳೆ ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ ಮೇಲೆ ಗುಂಡು ಹಾರಿಸಿದ್ದ ಘಟನೆಯೂ ನಡೆದಿತ್ತು. ಕೃತ್ಯವೆಸಗಿರುವ ಆರೋಪಿ ಮನೆಗೆ ಇಂದು ಪೊಲೀಸರ ತಂಡ ತೆರಳಿದ್ದು, ಈ ವೇಳೆ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ದೆಹಲಿ ಪೊಲೀಸ್ ಕಮಿಷನರ್​​ ರಾಕೇಶ್​ ಆಸ್ತಾನ​, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 23 ಜನರ ಬಂಧನ ಮಾಡಲಾಗಿದೆ. ಸಣ್ಣ ವಿಚಾರಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ಆರಂಭಗೊಂಡಿದ್ದು, ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಅದರ ಆಧಾರದ ಮೇಲೆ ಆರೋಪಿಗಳ ಬಂಧನ ಮಾಡಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!