Wednesday, September 27, 2023

Latest Posts

ಹರಿಯಾಣದಲ್ಲಿ ಹಿಂಸಾಚಾರ: ಶಾಲಾ-ಕಾಲೇಜು ಬಂದ್, ಇಂಟರ್ನೆಟ್ ಸೇವೆ ಇಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದ ನುಹ್ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ.

ಘರ್ಷಣೆ ಅತಿರೇಖಕ್ಕೆ ತಿರುಗಿದ್ದು, ಈಗಾಗಲೇ ಐದು ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಜತೆಗೆ ನಾಳೆಯವರೆಗೂ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಘರ್ಷಣೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರೀಕ್ಷೆಗಳನ್ನು ಮುಂದೂಡಲಾಗಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಸೇರುವ ಸಭೆ ಸಮಾರಂಭಗಳಿಗೂ ಬ್ರೇಕ್ ಹಾಕಲಾಗಿದೆ.

ವಿಶ್ವ ಹಿಂದೂ ಪರಿಷತ್‌ನ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯನ್ನು ಗುರುಗ್ರಾಮ-ಆಳ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪೊಂದು ತಡೆದಿತ್ತು. ಇಲ್ಲಿಂದ ಘರ್ಷಣೆ ಆರಂಭವಾಗಿದೆ.  ಎರಡು ಗುಂಪುಗಳ ನಡುವೆ ಘರ್ಷಣೆ ಏಕಾಏಕಿ ಹೆಚ್ಚಾಗಿದ್ದು, ಸಿಕ್ಕ ಸಿಕ್ಕ ವಾಹನಗಳಿಗೆ, ಜನರಿಗೆ ಕಲ್ಲು ತೂರಿದ್ದಾರೆ.ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!