ಕೊಲ್ಲಾಪುರದಲ್ಲಿ ಹಿಂಸಾಚಾರ: 36 ಮಂದಿ ಬಂಧನ, ಜೂ.19ವರೆಗೆ ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್‌ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಭಾರೀ ಪ್ರತಿಭಟನೆ ನಡೆದಿದೆ.

ಪ್ರತಿಭಟನೆ ಈಗಾಗಲೇ ಹಿಂಸಾಚಾರ ರೂಪ ಪಡೆದಿದ್ದು, ಸೆಕ್ಷನ್ ೧೪೪ ಜಾರಿ ಮಾಡಲಾಗಿತ್ತು. ಜತೆಗೆ ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿಯಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ೩೬ ಜನರನ್ನು ಬಂಧಿಸಲಾಗಿದೆ. ಸ್ಟೇಟಸ್ ಹಾಕಿದ್ದ ಬಾಲಕರು ಸೇರಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲ್ಲಾಪುರ ಸಹಜ ಸ್ಥಿತಿಯತ್ತ ಮರಳಿದ್ದು, ಅಂಗಡಿ ಮುಂಗಟ್ಟುಗಳು ಇಂದು ತೆರೆಯಲಾಗಿವೆ.ಜೂ.೧೯ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿದೆ. ಬೆಳಗಾವಿಗೂ ವಿವಾದ ಕಾಲಿಟ್ಟಿದ್ದು, ಛತ್ರಪತಿ ಶಿವಾಜಿ ಮಹಾರಾಜ್‌ಗೆ ಅಪಮಾನ ಮಾಡುವ ರೀತಿಯ ಸ್ಟೇಟಸ್ ಹಾಕಿದವರು ಬೆಳಗಾವಿಯಲ್ಲಿದ್ದಾರೆ ಎನ್ನಲಾಗಿದೆ. ಬೆಳಗಾವಿ ಘರ್ಷಣೆ ಕುರಿತಾದಂತೆ ೫೦ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!